
ಮುವತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್ ಕೆ. ಎಸ್.ಆರ್.ಟಿ. ಸಿ. ಬಸ್ ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ನೆಲಕ್ಕುರುಳಿದೆ. ತುಮಕೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ ಏಕಾಏಕಿ ಆಕ್ಸೆಸ್ ಕಟ್ ಆದ ಹಿನ್ನಲೆಯಲ್ಲಿ ಬಿ.ಹೆಚ್. ರಸ್ತೆಯಿಂದ ಸರ್ವಿಸ್ ರಸ್ತೆಗೆ ಉರುಳಿದ್ದು ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳನ್ನು ಹೊರತುಪಡಿಸಿದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಆದರೆ ನೆಲಕ್ಕುರುಳಿದ್ದ ಬಸ್ ನೋಡಲು ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಮುಂದಾದ ವೇಳೆ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಪ್ರಾಯಾಣಿಸುತ್ತಿದ್ದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದ ಹಿನ್ನೆಲೆಯಲ್ಲಿ ಗಾಯಾಳುಗಳನ್ನು ಗುಬ್ಬಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕೆತ್ಸೆ ಪಡೆದರು.
ಕೆ.ಎಸ್ತಿ.ಆರ್.ಟಿ.ಸಿ. ಬಸ್ ತಿಪಟೂರು ಡಿಪೋಗೆ ಸಂಭಂದಿಸಿದ್ದಾಗಿದ್ದು ಪ್ರಯಾಣಿಸುತ್ತಿದ್ದ ಸರ್ಕಾರಿ ಬಸ್ ತಳಭಾಗದ ಆಕ್ಸಲ್ ಕಟ್ ಆದ ಹಿನ್ನೆಲೆಯಲ್ಲಿ ತಾಂತ್ರಿಕ ದೋಷ ಉಂಟಾಗಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡಿದೆ ಎಂದು ತಿಳಿದು ಬಂದಿದೆ.
ತಕ್ಷಣವೇ ಸ್ಥಳೀಯರು ಸ್ಪಂದಿಸಿ ಪ್ರಯಾಣಿಕರ ರಕ್ಷಣೆ ಕಾರ್ಯಾಚರಣೆಗೆ ಮುಂದಾದರು. ಮಾಹಿತಿ ತಿಳಿದ ಗುಬ್ಬಿ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ತಕ್ಷಣ ಗಾಯಗೊಂಡ ಪ್ರಯಾಣಿಕರಿಗೆ ಸಮೀಪದ ಆಸ್ಪತ್ರೆಗೆ ದಾಖಲಿಸಿದರು.

ಬಸ್ ಪಲ್ಟಿಯಾದ ಫರಿಣಾಮವಾಗಿ ಕಾಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾದರೂ ನಂತರ ಪೊಲೀಸರು ಕ್ರಮ ಕೈಗೊಂಡು ಸಂಚಾರವನ್ನು ಸುಗಮಗೊಳಿಸಿದರು.
